ಪುತ್ತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
Update: 2019-05-09 14:54 GMT
ಪುತ್ತೂರು : ಮನೆಯೊಳಗೆ ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಕೊಡಂಜೆ ಎಂಬಲ್ಲಿ ಗುರುವಾರ ಸಂಭವಿಸಿದೆ.
ಪಡ್ನೂರು ಗ್ರಾಮದ ಕೊಡಂಜೆ ನಿವಾಸಿ ಕೃಷ್ಣಪ್ಪ ಪೂಜಾರಿ (68) ಆತ್ಮಹತ್ಯೆ ಮಾಡಿಕೊಂಡವರು. 10 ವರ್ಷಗಳಿಂದ ಮಂಡಿನೋವು ಸಮಸ್ಯೆ ಹಾಗೂ ಅದರ ಜತೆಗೆ ಕಳೆದ ಎರಡು ವರ್ಷಗಳಿಂದ ಮೂಲವ್ಯಾಧಿ ಹಾಗೂ ಹೊಟ್ಟೆನೋವು ಕಾಯಿಲೆಯಿಂದ ಬಳಲುತ್ತಿದ್ದರು. ಕಾಯಿಲೆಗೆ ಚಿಕಿತ್ಸೆ ಪಡೆದಿದ್ದರೂ ಗುಣಮುಖವಾಗದ ಹಿನ್ನಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರ ಪುತ್ರ ಚಂದ್ರಹಾಸ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.