ಲೇಖಕ ಗಿರೀಶ ಜಕಾಪುರೆಗೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ

Update: 2019-05-09 15:11 GMT

ಉಡುಪಿ, ಮೇ 9: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ನೀಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ-2019ಕ್ಕೆ ಯುವ ಬರಹಗಾರ ಗಿರೀಶ ಜಕಾಪುರೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,000ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ.

ಪ್ರಶಸ್ತಿ ಆಯ್ಕೆ ಸಮಿತಿಯು ಗಿರೀಶ ಜಕಾಪುರೆ ಅವರ ‘ಅಲ್ಲಮನ ಗಜಲ್‌ಗಳು’ ಅಪ್ರಕಟಿತ ಕವನ ಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕವಿ, ಕಾದಂಬರಿಕಾರ, ನಾಟಕಕಾರ, ಕಥೆಗಾರ, ಪತ್ರಿಕೋದ್ಯಮಿ ಹೀಗೆ ಕನ್ನಡ ಸಾರಸ್ವತ ಲೋಕದಲ್ಲಿ ಹೆಸರುವಾಸಿಯಾದ ಕಡೆಂಗೋಡ್ಲು ಶಂಕರ ಭಟ್ಟರ ಸ್ಮರಣೆಯಲ್ಲಿ ಈ ಪ್ರಶಸ್ತಿಯನ್ನು ಅಪ್ರಕಟಿತ ಹಸ್ತಪ್ರತಿಗೆ ನೀಡಲಾಗುತ್ತದೆ.

ಗಿರೀಶ ಜಕಾಪುರೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಮೈಂದರ್ಗಿಯವರಾಗಿದ್ದು, ಪ್ರಸ್ತುತ ಕಲಬುರಗಿ ಜಿಲ್ಲೆಯ ಆಲಂದ ತಾಲೂಕಿನ ಮಾದನ ಹಿಪ್ಪರಗಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಹಿಂದಿ ಬಿ.ಎಡ್, ಎಂ.ಎ ಕನ್ನಡ ಪದವೀಧರರಾಗಿದ್ದು ಪಿ.ಎಚ್‌ಡಿ ಸಂಶೋಧನಾರ್ಥಿಯಾಗಿದ್ದಾರೆ. ಇವರ ಹಲವು ಕೃತಿಗಳು ಪ್ರಕಟಗೊಂಡಿದ್ದು, ಇವುಗಳಲ್ಲಿ ‘ಮೊದಲ ಮುತ್ತು(ಕಾವ್ಯ), ‘ನೇಣು’(ಕಥಾಸಂಕಲನ), ‘ಬೆಳಕು ಬಂತು’ (ಕಾದಂಬರಿ) ಮುಖ್ಯವಾದವು. ಅಲ್ಲದೆ ಹಲವಾರು ಮಕ್ಕಳ ಪದ್ಯಗಳು, ಕಥೆಗಳು, ವ್ಯಕ್ತಿಚಿತ್ರ ಗಳು, ಗಜಲ್‌ಗಳು ಪ್ರಕಟಗೊಂಡಿವೆ. ಅನುವಾದಕರಾಗಿಯೂ ಅವರು ಪರಿಚಿತರಾಗಿದ್ದಾರೆ.

ಇವರಿಗೆ ಡಿ.ಎಸ್.ಕರ್ಕಿ ಕಾವ್ಯ ಪ್ರಶಸ್ತಿ, ಮಾಸ್ತಿ ಕಾದಂಬರಿ ಪ್ರಶಸ್ತಿ, ಅತ್ತಿಮಬ್ಬೆ ಕಾದಂಬರಿ ಪ್ರಶಸ್ತಿ, ಅತ್ತಿಮಬ್ಬೆ ಕಾವ್ಯ ಪ್ರಶಸ್ತಿ, ಬೇಂದ್ರೆ ಗ್ರಂಥ ಬಹುಮಾನ, ಮುಂಬೆಳಗು ಕಥಾ ಪುರಸ್ಕಾರ, ಭಾಲ್ಕಿ ಪಟ್ಟದ್ದೇವರ ಮಕ್ಕಳ ಸಾಹಿತ್ಯ ಪ್ರಶಸ್ತಿ, ಸಾಧಕ ಶಿಕ್ಷಕ ಪ್ರಶಸ್ತಿ, ಆದರ್ಶ ಶಿಕ್ಷಕ ಪ್ರಶಸ್ತಿಯಂತಹ ಹಲವಾರು ಪ್ರಶಸ್ತಿಗಳು ಲಭಿಸಿವೆ.

ಇವರಿಗೆ ಡಿ.ಎಸ್.ಕರ್ಕಿ ಕಾವ್ಯ ಪ್ರಶಸ್ತಿ, ಮಾಸ್ತಿ ಕಾದಂಬರಿ ಪ್ರಶಸ್ತಿ, ಅತ್ತಿಮಬ್ಬೆ ಕಾದಂಬರಿ ಪ್ರಶಸ್ತಿ, ಅತ್ತಿಮಬ್ಬೆ ಕಾವ್ಯ ಪ್ರಶಸ್ತಿ, ಬೇಂದ್ರೆ ಗ್ರಂಥ ಬಹುಮಾನ, ಮುಂಬೆಳಗು ಕಥಾ ಪುರಸ್ಕಾರ, ಾಲ್ಕಿಪಟ್ಟದ್ದೇವರಮಕ್ಕಳಸಾಹಿತ್ಯಪ್ರಶಸ್ತಿ,ಸಾಕ ಶಿಕ್ಷಕ ಪ್ರಶಸ್ತಿ, ಆದರ್ಶ ಶಿಕ್ಷಕ ಪ್ರಶಸ್ತಿಯಂತಹ ಹಲವಾರು ಪ್ರಶಸ್ತಿಗಳು ಲಭಿಸಿವೆ. ಆಗಸ್ಟ್ ತಿಂಗಳಲ್ಲಿ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗಿರೀಶ ಜಕಾಪುರೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾ ಗುವುದು ಎಂದು ಕೇಂದ್ರದ ಸಂಯೋಜಕ ಪ್ರೊ. ವರದೇಶ ಹಿರೇಗಂಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News