ಸಚಿವೆ ಜಯಮಾಲ ನಾಳೆ ಉಡುಪಿಗೆ

Update: 2019-05-09 15:54 GMT

ಉಡುಪಿ, ಮೇ 9: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಮ ಸಚಿವೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಅವರು ನಾಳೆ ಉಡುಪಿ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆ 8:50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವೆ, 11 ಗಂಟೆಗೆ ಉಡುಪಿಗೆ ಆಗಮಿಸಲಿದ್ದಾರೆ. ಬಳಿಕ 11:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಲು ಕರೆದ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News