ಮಂಗಳೂರು: ಕುಖ್ಯಾತ ರೌಡಿ ಶೀಟರ್ ಮೇಲೆ ಪೊಲೀಸ್ ಫೈರಿಂಗ್

Update: 2019-05-10 03:36 GMT

ಮಂಗಳೂರು, ಮೇ 9: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಮೇಲೆ ಮಂಗಳೂರು ನಗರ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ರೌಡಿ ಶೀಟರ್ ಗೌರೀಶ್ ಗಾಯಗೊಂಡ ಆರೋಪಿ.

ರೌಡಿಶೀಟರ್ ಗೌರೀಶ್ ವಿರುದ್ಧ ಮಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ರೌಡಿಶೀಟರ್ ನ್ನು ಬಂಧಿಸಲು ಬಲೆಬೀಸಿದ್ದರು.

ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸ್ ತಂಡದಲ್ಲಿನ ಪೇದೆಯೊಬ್ಬರಿಗೆ ಆರೋಪಿ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಜಾಗೃತರಾದ ಪೊಲೀಸರು ತಮ್ಮ ಪ್ರಾಣರಕ್ಷಣೆಗಾಗಿ ರೌಡಿಶೀಟರ್ ನ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಘಟನೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಶೀನಪ್ಪ ಎಂಬವರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ರೌಡಿಶೀಟರ್ ವಿರುದ್ಧ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಮೂರು ಕೊಲೆ ಆರೋಪ ಪ್ರಕರಣಗಳಿವೆ.

ಆರೋಪಿಯು ಜನರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದಲ್ಲಿ ಬುಧವಾರ ಮತ್ತೊಂದು ಕೇಸು ದಾಖಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News