ಬಿ.ಸಿ.ರೋಡ್: ಸಂಜೀವಿನಿ ಒಕ್ಕೂಟಗಳ ಸ್ವ-ಉದ್ಯೋಗ ತರಬೇತಿ-ಮಾಹಿತಿ ಕಾರ್ಯಗಾರ

Update: 2019-05-10 12:53 GMT

ಬಂಟ್ವಾಳ, ಮೇ 10: ಬಂಟ್ವಾಳ ತಾಲೂಕು ಪಂಚಾಯತ್ ವತಿಯಿಂದ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟಗಳ ಸ್ವ-ಉದ್ಯೋಗ ತರಬೇತಿ ಹಾಗೂ ಮಾಹಿತಿ ಕಾರ್ಯಗಾರವು ಬಿ.ಸಿ.ರೋಡಿನ ಎಸ್‍ಜಿಎಸ್‍ವೈ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ರಾಜಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿದ್ದು, ಇದನ್ನು ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಬಂಟ್ವಾಳ ತಾಲೂಕಿನ 58 ಗ್ರಾಪಂಗಳ ಪೈಕಿ 40 ಗ್ರಾಪಂಗಳಲ್ಲಿ ಎನ್‍ಆರ್‍ಎಲ್‍ಎಂ ಸಂಜೀವಿನಿ ಯೋಜನೆಯಡಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ರಚನೆಯಾಗಿದೆ. ಸ್ವಸಹಾಯ ಗುಂಪುಗಳಲ್ಲಿ ಜೀವನೋಪಾಯ ಚಟವಟಿಕೆ ನಡೆಸಿ ಆರ್ಥಿಕ ವಾಗಿ ಸಬಲೀಕರಣಗೊಳಿಸಲು ಸ್ವಸಹಾಯ ಸಂಘದ ಸದಸ್ಯರಿಗೆ ಕಾರ್ಯಾಗಾರವನ್ನು ನೀಡಲಾಗುತ್ತಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಸತೀಶ್ ಮಾಬೆನ್ ಮಂಗಳೂರು, ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿ ಪಾಂಡುರಂಗ ಕೆ. ಎನ್‍ಆರ್ ಎಲ್‍ಎಂನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್, ಸಿಡಾಕ್ ಮಂಗಳೂರು ಇದರ ಸಮಾಲೋಚಕಿ ಪ್ರವೀಶ್ಯ ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಪ್ರಶಾಂತ್ ಬಳಂಜ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಪ್ರಾಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿದರು. ವಲಯಮೇಲ್ವಿಚಾರಕ ಕುಶಾಲಪ್ಪ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News