ಮೇ 15: ದೈಹಿಕ ಅರ್ಹತೆ ಪರೀಕ್ಷೆ
Update: 2019-05-10 13:03 GMT
ಮಂಗಳೂರು, ಮೇ 10: ದ.ಕ. ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಸಿಪಿಸಿ/ಮಪಿಸಿ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ದೈಹಿಕ ಅರ್ಹತೆ ಮತ್ತು ಸಾಮರ್ಥ್ಯತೆ ಪರೀಕ್ಷೆಯು ಮೇ 15 ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಭ್ಯರ್ಥಿಗಳಿಗೆ ಈಗಾಗಲೇ ಸಂದೇಶ ರವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನದಂದು ಪೂವಾಹ್ನ 6:30ಕ್ಕೆ ಮಂಗಳಾ ಕ್ರೀಡಾಂಗಣದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ ನ್ನು ವೀಕ್ಷಿಸಬಹುದು. ಅಭ್ಯರ್ಥಿಗಳು ತಮಗೆ ಸಂಬಂಧಪಟ್ಟ ಕರೆಪತ್ರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಜಿಲ್ಲಾ ನೇಮಕಾತಿ ಸಮಿತಿಯ ಅಧ್ಯಕ್ಷರ ಪ್ರಕಟನೆ ತಿಳಿಸಿದೆ.