ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ: ಅರ್ಜಿ ಆಹ್ವಾನ

Update: 2019-05-10 13:04 GMT

 ಮಂಗಳೂರು, ಮೇ 10: ಪ್ರಸಕ್ತ ಸಾಲಿನಲ್ಲಿ ದ.ಕ. ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ. ಅಪೂರ್ಣ ಅರ್ಜಿ, ತಡವಾಗಿ ಬಂದ ಅರ್ಜಿ ಹಾಗೂ ನಿಬಂಧನೆಗಳನ್ನು ಪೂರೈಸದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಹ ಅರ್ಜಿಗಳ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಈ ತರಬೇತಿಯ ಅವಧಿಯು ಎರಡು ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ 10,000 ರೂ. ಶಿಷ್ಯ ವೇತನವನ್ನು ಈ ಅವಧಿಯಲ್ಲಿ ನೀಡಲಾಗುವುದು.

ಆಯ್ಕೆಯಾದ ತರಬೇತಿದಾರರಿಗೆ ಕಚೇರಿ ಸ್ಥಾಪಿಸಿಕೊಳ್ಳಲು, ಕಾನೂನು ಪುಸ್ತಕಗಳನ್ನು ಖರೀದಿಲು ಮತ್ತು ಪೀಠೋಪಕರಣ/ಕಂಪ್ಯೂಟರ್ ಇತ್ಯಾದಿ ತೆಗೆದುಕೊಳ್ಳಲು ಒಮ್ಮೆ ತಾಲೂಕು/ಟಿ.ಎಂ.ಸಿ ಕೇಂದ್ರ ಸ್ಥಾನಗಳಲ್ಲಿ 50,000 ರೂ. ಮತ್ತು ನಗರಸಭೆ/ಮಹಾನಗರ ಪಾಲಿಕೆಗಳಲ್ಲಿ ಒಂದು ಲಕ್ಷ ರೂ. ಅನುದಾನ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಆಯ್ಕೆ ಸಮಿತಿಯು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಸರಕಾರಿ ವಕೀಲರು ಅಥವಾ ಕನಿಷ್ಠ 15 ವರ್ಷಗಳ ವಕೀಲ ವೃತ್ತಿಯಲ್ಲಿ ಅನುಭವವುಳ್ಳ ವಕೀಲರ ಅಧೀನದಲ್ಲಿ ತರಬೇತಿಗೆ ನಿಯೋಜಿಸಲಾಗುವುದು.

ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಅಬ್ಬಕ್ಕನಗರ, ಕೊಟ್ಟಾರ, ಮಂಗಳೂರು-575006, ಇವರಿಗೆ ಸಲ್ಲಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News