ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
Update: 2019-05-10 16:41 GMT
ಉಡುಪಿ, ಮೇ 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಶುಕ್ರವಾರ ರಜತಾದ್ರಿ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್‌ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ, ಜಾನಪದ ಕಲಾವಿದ ಶಂಕರ್‌ದಾಸ್, ಮೆಸ್ಕಾಂ ಸಹಾಯಕ ಅಭಿಯಂತರ ಮಾರ್ತಾಂಡಪ್ಪ ಮತ್ತಿತರರು ಉಪಸ್ಥಿತರಿದ್ದರು.