ಉಡುಪಿ: ಮಳೆಗಾಗಿ ಸಾಮೂಹಿಕ ಪ್ರಾರ್ಥನೆ
ಉಡುಪಿ, ಮೇ 10: ಜಿಲ್ಲೆಯಲ್ಲಿ ಸಾಮಾನ್ಯವಾಗಿ ಈ ಸಮಯದಲ್ಲಿ ಸುರಿಯಬೇಕಿದ್ದ ಮುಂಗಾರು ಪೂರ್ವ ಮಳೆ ಬಾರದೆ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, ಇದಕ್ಕಾಗಿ ಮಳೆಗಾಗಿ ಆಗ್ರಹಿಸಿ ಶುಕ್ರವಾರ ಉಡುಪಿಯ ನಾಗರಿಕರಿಂದ ಸಾಮೂಹಿಕವಾಗಿ ದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು.
ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ ಹಾಗೂ ಅದಮಾರು ಮಠದ ಕಿರಿಯ ಯತಿಗಳಾದ ಶ್ರೀಈಶಪ್ರಿಯ ತೀಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಉಡುಪಿಯ ಶ್ರೀಕೃಷ್ಣ ಮಠ, ಅನಂತೇಶ್ವರ ದೇವಸ್ಥಾನ ಹಾಗೂ ಚಂದ್ರಮೌಳೀಶ್ವರ ದೇವಾಲಯಗಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಶಾಸಕ ಕೆ.ರಘುಪತಿ ಭಟ್ ಹಾಗೂ ಪತ್ನಿ ಶಿಲ್ಪಾ ಆರ್. ಭಟ್ ಈ ಸಂದರ್ಭ ದಲ್ಲಿ ಉಪಸ್ಥಿತರಿದ್ದು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ಜಿಪಂ ಅಧ್ಯಕ್ಷ ದಿನಕರ್‌ಬಾಬು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ್ ಪೂಜಾರಿ, ನಗರ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವೂದ್ ಅಬೂಬಕರ್, ನಗರ ಬಿಜೆಪಿ ಕಾರ್ಯದರ್ಶಿ ಜಗದೀಶ್ ಆಚಾರ್ಯ, ನಗರಸಭೆಯ ಚುನಾಯಿತ ಸದಸ್ಯರು ಇದರಲ್ಲಿ ಪಾಲ್ಗೊಂಡು.