ಮರವಂತೆಯಲ್ಲಿ ಕಾರು ಢಿಕ್ಕಿ: ಕಾಶ್ಮೀರದ ಯುವಕ ಮೃತ್ಯು
Update: 2019-05-10 17:26 GMT
ಕುಂದಾಪುರ, ಮೇ 10: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಜಮ್ಮು ಕಾಶ್ಮೀರದ ಯುವಕನೋರ್ವ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಲಾರಿ ಚಾಲಕ, ಜಮ್ಮು ಕಾಶ್ಮೀರದ ಕುಲದೀಪ್ ಕುಮಾರ್(31) ಎಂದು ಗುರುತಿಸಲಾಗಿದೆ.
ನಡೆದುಕೊಂಡು ಹೋಗುತ್ತಿದ್ದ ಕುಲದೀಪ್‌ರಿಗೆ ಕುಂದಾಪುರ ಕಡೆಯಿಂದ ಬೈಂದೂರಿನತ್ತ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಕುಲದೀಪ್‌ರನ್ನು ಕುಂದಾಪುರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಢಿಕ್ಕಿಯ ಬಳಿಕ ಪರಾರಿಯಾಗಿದ್ದ ಕಾರನ್ನು ಬೈಂದೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.