ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ವಂಚನೆ: ದೂರು ದಾಖಲು

Update: 2019-05-10 17:43 GMT

ಬಂಟ್ವಾಳ, ಮೇ 10: ಕ್ರಿಪ್ಟೋ ಕರೆನ್ಸಿಯ ಹೂಡಿಕೆಯ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಸಾವಿರಾರು ರೂ. ವಂಚನೆ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೇಶವ ಮೂರ್ತಿ ಸಿ. ಎಂಬವರು  ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ  ತುಂಬಾ ಲಾಭಾಂಶ ಕೊಡುತ್ತೇನೆ ಎಂದು ನಂಬಿಸಿ, ತನ್ನಿಂದ  60 ಸಾವಿರ ರೂ.ವನ್ನು ಪಡೆದಿದ್ದಾರೆ. ಬಳಿಕ ಕ್ರಿಪ್ಟೋ ಕರೆನ್ಸಿಯನ್ನು ನೀಡದೆ, ಹಣವನ್ನು ವಾಪಸ್ ನೀಡದೇ ವಂಚನೆ ಮಾಡಿದ್ದಾರೆ ಎಂದು ಶಿವ ಗುರುದತ್ತ ಎಂಬವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News