ರಾಜ್ಯಮಟ್ಟದ ಯೋಗಾಸನ ಚಾಂಪಿಯನ್‍ಶಿಪ್: ಆಳ್ವಾಸ್ ಕಾಲೇಜಿನ ಐವರು ರಾಷ್ಟ್ರಮಟ್ಟಕ್ಕೆ ಆಯ್ಕೆ

Update: 2019-06-18 17:35 GMT

ಮೂಡುಬಿದಿರೆ: ಕರ್ನಾಟಕ ಅಮೆಚ್ಯೂರ್ ಯೋಗ ಸ್ಪೋಟ್ಸ್ ಅಸೋಸಿಯೇಶನ್ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲಾ ಯೋಗ ಫೆಡರೇಶನ್ ಸಹಯೋಗದಲ್ಲಿ ಶಿರ್ಸಿಯ ವಿದ್ಯಾದೀರಜ ಕಲಾಕ್ಷೇತ್ರ ನಡೆದ ಕರ್ನಾಟಕ ರಾಜ್ಯಮಟ್ಟದ 39ನೇ ಯೋಗಾಸನ ಚಾಂಪಿಯನ್‍ಶಿಪ್‍ನಲ್ಲಿ ಆಳ್ವಾಸ್ ನ್ಯಾಚುರೋಪತಿಯ ಯೋಗಿಕ್ ಸೈನ್ಸ್ ಕಾಲೇಜಿನ 5 ಮಂದಿ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚೈತ್ರಾ ಶೆಟ್ಟಿ, ವಿನಯಶ್ರೀ, ಸ್ವಸ್ತಿ ರೈ, ಅಮೃತಾ, ಶುೃತಿ ರಾವ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು. ಕಾಲೇಜಿನ ವಿದ್ಯಾರ್ಥಿಗಳಾದ ವಿನುತಾ, ಸಾಗರ್, ಶಂಕರ್, ಕಾವ್ಯಾ ಕೂಡ ವಿವಿಧ ವಿಭಾಗಗಳಲ್ಲಿ ಬಹುಮಾನ ಗಳಿಸುವ ಮೂಲಕ ಸಾಧನೆ ಮೆರೆದಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ , ಕಾಲೇಜಿನ ಪ್ರಾಂಶುಪಾಲರಾದ ಡಾ.ವನಿತಾ ಶೆಟ್ಟಿ ಅಭಿನಂದಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News