ಇಂದು ಸಂಜೆ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣವಚನ

Update: 2019-07-26 05:24 GMT
ಫೋಟೊ ಕೃಪೆ: ANI

 ಬೆಂಗಳೂರು, ಜು.26: ನಾನು ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆ ಹಕ್ಕು ಮಂಡಿಸಿದ್ದೇನೆ ಇಂದು ಸಂಜೆ 6ರಿಂದ 6:15ರ ಒಳಗಾಗಿ ಪ್ರಮಾಣವಚನ ಸ್ವೀಕಾರ ಮಾಡಲು ಸಮಯ ಕೊಡಬೇಕೆಂದು ಕೇಳಿದ್ದೇನೆ. ಇದಕ್ಕೆ ರಾಜ್ಯಪಾಲರು ಸಹಮತ ವ್ಯಕ್ತಪಡಿಸಿ ಪತ್ರ ನೀಡಿದ್ದಾರೆ ಎಂದು ನಿಯೋಜಿತ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

 ನಮ್ಮೆಲ್ಲಾ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು, ಎಂಎಲ್‌ಸಿ ಗಳು, ಅದರಲ್ಲೂ ವಿಶೇಷವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಿಎಲ್‌ಪಿ ನಾಯಕ ಸಿದ್ದರಾಮಯ್ಯಗೆ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಮನವಿ ಮಾಡುತ್ತಿದ್ದೇನೆ. ಅವರಿಗೆ ಪತ್ರ ಬರೆಯುತ್ತಿದ್ದೇನೆ ಎಂದು ಬಿಎಸ್‌ವೈ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News