ಬಾಂಗ್ಲಾ: ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 114ಕ್ಕೆ

Update: 2019-07-26 17:23 GMT

ಢಾಕಾ, ಜು. 26: ಬಾಂಗ್ಲಾದೇಶದಲ್ಲಿ ಈ ಬಾರಿಯ ಮಳೆಗಾಲದಲ್ಲಿ ಮಳೆ ಸಂಬಂಧಿ ಕಾರಣಗಳಿಂದಾಗಿ ಮೃತಪಟ್ಟವರ ಸಂಖ್ಯೆ ಶುಕ್ರವಾರ 114ನ್ನು ತಲುಪಿದೆ ಹಾಗೂ ದೇಶದ ಹಲವು ಭಾಗಗಳಲ್ಲಿ ಈಗಲೂ ಪ್ರವಾಹ ನೆಲೆಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ಮೂರು ದಿನಗಳ ಅವಧಿಯಲ್ಲಿ ಸುಮಾರು 30 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ಮಳೆಗಾಲದಲ್ಲಿ ಮೃತಪಟ್ಟವರ ಸಂಖ್ಯೆ 114ನ್ನು ತಲುಪಿದೆ ಹಾಗೂ ಹಲವು ವರ್ಷಗಳ ಅವಧಿಯಲ್ಲಿ ಈ ಮಳೆಗಾಲವು ದೇಶದ ಅತ್ಯಂತ ಭಯಾನಕ ಮಳೆಗಾಲವಾಗಿ ಪರಿಣಮಿಸಿದೆ.

ಹೆಚ್ಚಿನವರು ಮುಳುಗಿ ಮೃತಪಟ್ಟಿದ್ದಾರೆ. ಕೆಲವರು ಹಾವು ಕಡಿತ, ಭೂಕುಸಿತ ಮತ್ತು ಸಿಡಿಲು ಬಡಿದು ಪ್ರಾಣ ಕಳೆದುಕೊಂಡಿದ್ದಾರೆ.

ಜಮಾಲ್ಪುರ ಜಿಲ್ಲೆಯಲ್ಲಿ ಗುರುವಾರ ಪ್ರವಾಹಕ್ಕೆ ಸಿಲುಕಿದ ದೋಣಿಯೊಂದು ಮಗುಚಿದಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ಐವರು ಬಾಲಕಿಯರು ಪ್ರಾಣ ಕಳೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News