ಮಲೈ ಮಹದೇಶ್ವರಬೆಟ್ಟ: ಮೂಲಭೂತ ಸೌಕರ್ಯ, ಸ್ವಚ್ಚತೆಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಸೂಚನೆ

Update: 2019-07-26 18:52 GMT

ಹನೂರು, ಜು.6: ಮಲೈ ಮಹದೇಶ್ವರಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಹಾಗೂ ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಲು ಅಧಿಕಾರಿಗಳು ಕ್ರಮ ವಹಿಸಬೇಕೆಂದು ಚಾಮರಾಜನಗರ ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಸೂಚಿಸಿದರು.

ಹನೂರು ತಾಲೂಕಿನ ಮಲೈಮಹದೇಶ್ವವರ ಬೆಟ್ಟದ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲನೆ ನೆಡಿಸಿದ ಬಳಿಕ ನಾಗಮಲೆ ಭವನದಲ್ಲಿ ಅಧಿಕಾರಿಗಳ ಸಭೆಯನ್ನು ನಡಿಸಿದ ಅವರು, ರಾಜ್ಯ, ಹೊರರಾಜ್ಯಗಳಿಂದಳೂ ಪ್ರವಾಸಿಗರು ಲಕ್ಷಾಂತರ ಸಂಖ್ಯೆಯಲ್ಲಿ ಮಾದಪ್ಪನ ದರ್ಶನಕ್ಕೆ ಆಗಮಿಸುತ್ತಾರೆ. ಅವರ ಭಾವನೆಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಅಲ್ಲದೆ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮಕೈಗೊಳ್ಳಿ. ಚಾಲನೆ ಇರುವ ಕಾಮಗಾರಿಗಳನ್ನು ತ್ವರಿತಗಯಲ್ಲಿ ನಿರ್ವಹಿಸುವಂತೆ ಸೂಚಿಸಿದರು.

ಸಭೆಗೂ ಮುನ್ನ ಜಿಲ್ಲಾಧಿಕಾರಿ ಮಲೈಮಹದೇಶ್ವರ ಬೆಟ್ಟದಲ್ಲಿನ ಮಹದೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಿರ್ಮಾಣವಾಗಿರುವ ಶುದ್ದ ನೀರಿನ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News