ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಕೋನರಡ್ಡಿ ರಾಜೀನಾಮೆ

Update: 2019-07-27 16:01 GMT

ಬೆಂಗಳೂರು, ಜು.27: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನಿರ್ವಹಿಸಿದ ಎನ್.ಎಚ್. ಕೋನರಡ್ಡಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯ ಸರಕಾರದ ಮಹತ್ವದ ಹುದ್ದೆಗಳಲ್ಲಿ ಒಂದಾಗಿದ್ದ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಕುಮಾರಸ್ವಾಮಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರದ ಪ್ರತಿಯನ್ನು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೂ ಕುಹಿಸಿಕೊಡಲಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News