ಮತದಾರರ ಪಟ್ಟಿಯಿಂದ ಹೆಸರು ತೆಗೆದ ವಿಚಾರ: ಚು.ಆಯೋಗಕ್ಕೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

Update: 2019-07-28 17:41 GMT

ಬೆಂಗಳೂರು, ಜು.28: ಕಳೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವುದನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಭಾರತೀಯ ಚುನಾವಣೆ ಆಯೋಗ ಹಾಗೂ ರಾಜ್ಯ ಚುನಾವಣೆ ಆಯೋಗಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದೆ. 

ಈ ಕುರಿತು ಸಮರ್ಪಣ ಸೇರಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲ ಜಿ.ಆರ್.ಮೋಹನ್ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭೆ ಚುನಾವಣೆ ಹಾಗೂ ಆರ್.ಆರ್.ನಗರ ಲೋಕಸಭೆ ಚುನಾವಣೆ ಹತ್ತಿರವಿದ್ದಾಗ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿದ್ದಾರೆ. ಇದರಿಂದ, ಮತದಾರರು ಮತ ಚಲಾಯಿಸುವ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಭಾರತೀಯ ಚುನಾವಣೆ ಆಯೋಗ, ರಾಜ್ಯ ಚುನಾವಣೆ ಆಯೋಗಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News