ಆಟೊ ಚಾಲಕ ನೇಣು ಬಿಗಿದು ಆತ್ಮಹತ್ಯೆ
Update: 2019-07-29 12:55 GMT
ಬೆಂಗಳೂರು, ಜು.29: ಮದ್ಯ ಸೇವನೆಯ ಚಟ ಅಂಟಿಸಿಕೊಂಡಿದ್ದ ಆಟೊ ಚಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕೆಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನೇತಾಜಿ ನಗರದ ಚರ್ಚ್ ಹಿಂಭಾಗದ ರಸ್ತೆಯ ಕೃಷ್ಣ (38) ಮೃತಪಟ್ಟವರು ಎಂದು ತಿಳಿದುಬಂದಿದೆ.
ಕೃಷ್ಣ ಈ ಹಿಂದೆ ಎರಡು ಬಾರಿ ಆತ್ಮಹತ್ಯೆ ಯತ್ನ ನಡೆಸಿದ್ದರು. ಆಗ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ, ಸರಿಯಾಗಿ ಔಷಧ ಸೇವಿಸದೆ ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ. ರವಿವಾರ ರಾತ್ರಿ 10ರ ವೇಳೆ ಮನೆಯ ಸದಸ್ಯರು ಮಲಗಿದ್ದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿರುವ ಕೆಪಿ ಅಗ್ರಹಾರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.