ಇಂಡೋನೇಶ್ಯದಲ್ಲಿ ಸುಮಾತ್ರದಲ್ಲಿ ಸುನಾಮಿ ಎಚ್ಚರಿಕೆ

Update: 2019-08-02 16:14 GMT

ಸಿಂಗಾಪುರ, ಆ. 2: ಇಂಡೋನೇಶ್ಯದ ಸುಮಾತ್ರ ಮತ್ತು ಜಾವಾ ದ್ವೀಪಗಳಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ ಬಳಿಕ, ಅಧಿಕಾರಿಗಳು ಸುನಾಮಿ ಎಚ್ಚರಿಕೆ ಹೊರಡಿಸಿದ್ದಾರೆ.

ಜಾವಾ ದ್ವೀಪದ ಬಂಟೆನ್ ರಾಜ್ಯದ ತೆಲುಕು ಬೆಟುಂಗ್ ನಗರದಿಂದ ಸುಮಾರು 227 ಕಿ.ಮೀ. ದೂರದ ಸಮುದ್ರದಲ್ಲಿ 59 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 7ರಷ್ಟಿದ್ದ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯಾಲಜಿಕಲ್ ಸರ್ವೆ ತಿಳಿಸಿದೆ.

ಭೂಕಂಪದ ಬೆನ್ನಿಗೇ ಇಂಡೋನೇಶ್ಯನ್ ಜಿಯೋಫಿಸಿಕ್ಸ್ ಸಂಸ್ಥೆ ಸುನಾಮಿ ಎಚ್ಚರಿಕೆ ಹೊರಡಿಸಿದೆ.

ಸಮುದ್ರ ತೀರದಲ್ಲಿ ವಾಸಿಸುತ್ತಿರುವ ಜನರು ಎತ್ತರದ ಪ್ರದೇಶಗಳಿಗೆ ಹೋಗುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ ಆಸಿಯಾನ್ ದೇಶಗಳ ಶೃಂಗ ಸಮ್ಮೇಳನದ ನೇಪಥ್ಯದಲ್ಲಿ ಶುಕ್ರವಾರ ಭಾರತದ ವಿದೇಶ ಸಚಿವ ಎಸ್. ಜೈಶಂಕರ್ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊರನ್ನು ಭೇಟಿಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News