ಆ.7 ರಿಂದ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಸೀಟು ಹಂಚಿಕೆ

Update: 2019-08-03 14:52 GMT

ಬೆಂಗಳೂರು, ಆ.3: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ Mop-up ಸುತ್ತಿನ ಸೀಟು ಹಂಚಿಕೆಯನ್ನು ಆ.7 ರಿಂದ 9ರವರೆಗೆ ನಡೆಸಲಾಗುವುದು. ವಿವರವಾದ ವೇಳಾಪಟ್ಟಿಯನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಈಗಾಗಲೇ ದಾಖಲಾತಿ ಪರಿಶೀಲನೆ ಮಾಡಿರುವ ಅರ್ಹ ಅಭ್ಯರ್ಥಿಗಳು ಮತ್ತೊಮ್ಮೆ ನೋಂದಣಿ ಮಾಡಿಕೊಳ್ಳುವ ಅವಶ್ಯಕತೆ ಇರುವುದಿಲ್ಲ. entry pass ಅನ್ನು ಡೌನ್‌ಲೋಡ್ ಮಾಡಿಕೊಂಡು, ಡಿಮ್ಯಾಂಡ್ ಡ್ರಾಫ್ಟ್ ಮತ್ತು ಮೂಲ ದಾಖಲಾತಿಗಳೊಂದಿಗೆ Mop-up ಸುತ್ತಿನಲ್ಲಿ ಭಾಗವಹಿಸಬಹುದು.

ಮೊದಲನೇ ಸುತ್ತಿನಲ್ಲಿ Choice 1&2 ಅಥವಾ ಎರಡನೆ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾದವರು ಈ MOP-UP ROUND ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗುವುದಿಲ್ಲ. ರಾಜ್ಯ ಪರೀಕ್ಷಾ ಪ್ರಾಧಿಕಾರ (ಕೆಇಎ)ಮುಖಾಂತರ ದಂತ ವೈದ್ಯಕೀಯ ಸೀಟು ಹಂಚಿಕೆಯಾದವರು ವೈದ್ಯಕೀಯ ಸೀಟು ಹಂಚಿಕೆಗಾಗಿ ಮಾತ್ರ ಭಾಗವಹಿಸಬಹುದು. ಆದರೆ, ದಂತ ವೈದ್ಯಕೀಯ ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಹರಾಗುವುದಿಲ್ಲ.

ಅಖಿಲ ಭಾರತ ಕೋಟದಲ್ಲಿ, ಡೀಮ್ಡ್ ವಿಶ್ವವಿದ್ಯಾಲಯ ಅಥವಾ ಯಾವುದೇ ಸಂಸ್ಥೆ, ಬೋರ್ಡ್‌ಗಳಿಂದ ಮೊದಲನೇ ಅಥವಾ ಎರಡನೇ ಸುತ್ತಿನಲ್ಲಿ ಯಾವುದೇ ಸೀಟುಗಳಿಗೆ ಹಂಚಿಕೆ-ಪ್ರವೇಶ ಪಡೆದಿದ್ದಲ್ಲಿ ಈ MOP-UP ROUND ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗುವುದಿಲ್ಲ.

UGNEET-2019 ಪರೀಕ್ಷೆಯಲ್ಲಿ ಅರ್ಹತೆ ಹೊಂದಿ, ನಂತರ ಪೂರಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದರೆ ಸುತ್ತಿನಲ್ಲಿ ಇತರೆ ಅರ್ಹ ಅಭ್ಯರ್ಥಿಗಳೊಂದಿಗೆ ಭಾಗವಹಿಸಬಹುದು. ಆನ್‌ಲೈನ್ ಮೂಲಕ ನೊಂದಣಿ ಮಾಡಿ ದಾಖಲಾತಿ ಪರಿಶೀಲನೆಗೆ ವೇಳಾಪಟ್ಟಿಯ ಪ್ರಕಾರ ಹಾಜರಾಗಬೇಕು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News