ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Update: 2019-08-05 17:54 GMT

ಶಿವಮೊಗ್ಗ, ಆ. 5: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಸುರುಗುಪ್ಪೆ ಗ್ರಾಮದಲ್ಲಿ ನಡೆದಿದೆ.

ಪರಶುರಾಮ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ತಮ್ಮ ಬಲಗಾಲಿನ ಆಪರೇಷನ್ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಂಡಿದ್ದರು. ಆದಾಗ್ಯೂ ಗುಣಮುಖವಾಗಿರಲಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅವರು ಕ್ರಿಮಿನಾಶಕ ಸೇವಿಸಿದ್ದರು.

ಇವರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News