ಬೆಳಗಾವಿಯಲ್ಲಿ ಸಿಎಂ ಬಿಎಸ್‌ವೈ: ನೆರೆ ಹಾವಳಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

Update: 2019-08-07 15:10 GMT

ಬೆಂಗಳೂರು, ಆ.7: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಜೆ 7 ಗಂಟೆ ವೇಳೆಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲೆಯಲ್ಲಿ ನೆರೆ ಹಾವಳಿಯಿಂದಾಗಿ ಉಂಟಾಗಿರುವ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸೇರಿದಂತೆ ಇನ್ನಿತರ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಯಡಿಯೂರಪ್ಪರನ್ನು ಶಾಸಕರಾದ ಉಮೇಶ್ ಕತ್ತಿ, ಅನಿಲ್ ಬೆನಕೆ, ಅಭಯ ಪಾಟೀಲ್ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು.

ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ, ವಿಮಾನ ನಿಲ್ದಾಣದಲ್ಲೆ ಅಧಿಕಾರಿಗಳೊಂದಿಗೆ ನಡೆಸಿದ ಮುಖ್ಯಮಂತ್ರಿ, ಜಿಲ್ಲೆಯಲ್ಲಿನ ನೆರೆ ಹಾವಳಿ, ಜಿಲ್ಲಾಡಳಿತದಿಂದ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News