ಪರಿಹಾರ ಕಾರ್ಯಗಳಿಗೆ ತೊಂದರೆಯಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

Update: 2019-08-07 15:34 GMT

ಬೆಂಗಳೂರು, ಆ.7: ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಹೆಚ್ಚುತಲೇ ಇರುವುದರಿಂದ ದಿಲ್ಲಿ ಕಾರ್ಯಕ್ರಮಗಳನ್ನು ಕೈ ಬಿಟ್ಟು, ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವಂತೆ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಪರಿಹಾರ ಕಾರ್ಯಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿಗಳನ್ನು ಅವಲೋಕಿಸಿ, ಸಂತ್ರಸ್ತ ಜನರಿಗೆ ರಾಜ್ಯ ಸರಕಾರದ ನೆರವು ಮತ್ತು ಪರಿಹಾರ ಕಾರ್ಯಗಳ ಉಸ್ತುವಾರಿ ವಹಿಸಿದ್ದೇನೆ. ಎಲ್ಲ ಪರಿಸ್ಥಿತಿಗಳನ್ನು ಎದುರಿಸಲು ಆಡಳಿತಯಂತ್ರ ಸನ್ನದ್ಧವಾಗಿದ್ದು, ಈಗಾಗಲೇ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕಾರ್ಯಗಳಲ್ಲಿ ರಾಜ್ಯ ಸರಕಾರ ಸಮರೋಪಾದಿಯಲ್ಲಿ ತೊಡಗಿದೆ ಎಂದು ಅವರು ತಿಳಿಸಿದ್ದಾರೆ.

ಜನರಲ್ಲಿ ಮತ್ತು ವಿಶೇಷವಾಗಿ ರೈತಬಂಧುಗಳಲ್ಲಿ ನನ್ನ ವಿನಂತಿಯೆಂದರೆ, ರಾಜ್ಯ ಸರಕಾರ ಅಗತ್ಯ ನೆರವು, ಪರಿಹಾರ ಕಾರ್ಯಗಳಲ್ಲಿ ಏನು ಲೋಪವಾಗದಂತೆ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ನಾನು ಪ್ರಧಾನಮಂತ್ರಿಗಳನ್ನು, ಕೇಂದ್ರ ಸಚಿವರನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸಿದ್ದೇನೆ. ಪರಿಹಾರಕಾರ್ಯಗಳಲ್ಲಿ ಕೇಂದ್ರ ಸರಕಾರ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News