ಎಚ್‌ಎಸ್‌ವಿ ಸೇರಿ ಮೂವರಿಗೆ ಸಂಸ್ಕೃತಿ ಸಿರಿ ಪ್ರಶಸ್ತಿ
Update: 2019-08-08 18:34 GMT
ಬೆಂಗಳೂರು, ಆ.8: ಡಾ.ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನದ ‘ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ಸಾಹಿತಿ ಎಚ್.ಎಸ್.ವೆಂಕಟೇಶಮೂರ್ತಿ, ಜಾನಪದ ಕಲಾವಿದೆ ಮಲ್ಲವ್ವ ಮ್ಯಾಗೇರಿ ಹಾಗೂ ಸಂಗೀತ ಕಲಾವಿದ ಬಿ.ವಿ.ಶ್ರೀನಿವಾಸ್ ಭಾಜನರಾಗಿದ್ದಾರೆ.
ಪ್ರಶಸ್ತಿ ಪ್ರದಾನವನ್ನು ಆ.18ರ ಸಂಜೆ 6 ಗಂಟೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದು, ಪುರಸ್ಕೃತರಿಗೆ 25 ಸಾವಿರ ರೂ.ಗಳ ಗೌರವ ಧನ, ಸ್ಮರಣಿಕೆ ಮತ್ತು ಫಲತಾಂಬೂಲ ನೀಡಿ ಗೌರವಿಸಲಾಗುತ್ತದೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕಾರ್ಯಕ್ರಮವನ್ನು ಹೈಕೋರ್ಟ್‌ನ ನಿವೃತ್ತ ನ್ಯಾ.ಎಂ.ಎನ್. ವೆಂಕಟಾಚಲಯ್ಯ ಉದ್ಘಾಟಿಸಲಿದ್ದಾರೆ.