ಕೊಡಗಿನ 58 ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ: 2866 ಸಂತ್ರಸ್ಥರಿಗೆ ಆಶ್ರಯ

Update: 2019-08-09 18:32 GMT

ಮಡಿಕೇರಿ, ಆ.9 : ಕೊಡಗು ಜಿಲ್ಲೆಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯ 58 ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 15 ಪ್ರದೇಶಗಳಲ್ಲಿ ಭೂ ಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜಿಲ್ಲೆಯಲ್ಲಿ ಒಟ್ಟಾಗಿ 34 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 817 ಕುಟುಂಬಗಳ ಒಟ್ಟು 2866 ಸಂತ್ರಸ್ಥರು ಆಶ್ರಯ ಪಡೆದಿದ್ದಾರೆ.  

ಜಿಲ್ಲೆಯಲ್ಲಿ  ಈವರೆಗೆ 247 ಜನರನ್ನು ಮತ್ತು 11 ಜಾನುವಾರಗಳನ್ನು ರಕ್ಷಿಸಲಾಗಿದೆ. ಹಾಗೂ ಹೆಗ್ಗಳ ಗ್ರಾಮದ ತೋರ ಪ್ರದೇಶದಲ್ಲಿ 300 ಕುಟುಂಬಗಳನ್ನು ರಕ್ಷಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 7 ಜೀವಹಾನಿಯಾಗಿರುವ ಪ್ರಕರಣಗಳು ವರದಿಯಾಗಿದೆ. 

ಜಿಲ್ಲೆಯ ಅಧಿಕಾರಿ/ಸಿಬ್ಬಂದಿಗಳು ಕ್ಷೇತ್ರದಲ್ಲಿದ್ದು ಕ್ರಮ ವಹಿಸುತ್ತಿದ್ದಾರೆ. ಹಾಗೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಭಾರತೀಯ ಸೇನಾ ತುಕಡಿ, ಗೃಹ ರಕ್ಷಕ ದಳ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆಯವರೊಂದಿಗೆ ಸಂಘ ಸಂಸ್ಥೆಗಳೂ ಸಹ ಕೈಜೋಡಿಸುತ್ತಿದ್ದು, ಸಾರ್ವಜನಿಕರು ಸಹಕರಿಸಲು ಕೋರಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News