ಸ್ವಾತಂತ್ರ್ಯೋತ್ಸವ: ಸಿಎಂ ಯಡಿಯೂರಪ್ಪ ಧ್ವಜಾರೋಹಣ
Update: 2019-08-15 06:06 GMT
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು.
ಅತಿವೃಷ್ಟಿ, ಅನಾವೃಷ್ಟಿ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಅರ್ಧ ರಾಜ್ಯ ಈಗ ಜಲಪ್ರಳಯಕ್ಕೆ ಒಳಗಾಗಿದೆ. ಪ್ರವಾಹದಿಂದ ಈವರೆಗೆ ಸುಮಾರು 65 ಮಂದಿ ಮೃತಪಟ್ಟಿದ್ದಾರೆ. ಅವರು ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.