ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ: ವಾರ್ತಾ ಇಲಾಖೆ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ

Update: 2019-08-17 17:01 GMT

ಬೆಂಗಳೂರು, ಆ. 17: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವತ್ತ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಇಂದಿಲ್ಲಿ ಪ್ರಕಟಿಸಿದ್ದಾರೆ.

ಶನಿವಾರ ಎಲ್ಲ ಜಿಲ್ಲಾ ವಾರ್ತಾಧಿಕಾರಿಗಳ ರಾಜ್ಯ ಮಟ್ಟದ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಮಂಜೂರಾಗಿರುವ 565 ಹುದ್ದೆಗಳ ಪೈಕಿ ಅರ್ಧಕ್ಕೂ ಹೆಚ್ಚು ವಿವಿಧ ವೃಂದದ ಹುದ್ದೆಗಳ ಪೈಕಿ 255 ಹುದ್ದೆಗಳು ಖಾಲಿ ಇದೆ ಎಂದರು.

ಇಲಾಖೆಯಲ್ಲಿನ ವಿವಿಧ ಹುದ್ದೆಗಳ ಖಾಲಿ ಇದ್ದು, ಸರಕಾರದ ಅಪೇಕ್ಷೆ ಮತ್ತು ನಿರೀಕ್ಷೆಗೆ ಅನುಗುಣವಾಗಿ ಇಲಾಖೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಹುದ್ದೆಗಳ ಭರ್ತಿ ಅನಿವಾರ್ಯ ಎಂಬುದನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟು, ಇಲಾಖೆಯನ್ನು ಸದೃಢಗೊಳಿಸುವತ್ತ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಅವರು ತಿಳಿಸಿದರು.

ಇಲಾಖೆಯ ಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವತ್ತ ಕ್ರಮವಹಿಸುವುದಾಗಿ ಭರವಸೆ ನೀಡಿದ ಸಿದ್ದರಾಮಪ್ಪ ಅವರು, ಪ್ರತಿ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯಕ್ಷೇತ್ರ ಮತ್ತು ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡುವುದು ಎಂದು ಹೇಳಿದರು. ಜಂಟಿ ನಿರ್ದೇಶಕರಾದ ಎಚ್.ಬಿ.ದಿನೇಶ್, ಮುರುಳೀಧರ್, ಪ್ರಕಾಶ್ ಸೇರಿ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News