ಅವ್ಯವಹಾರ ಆರೋಪ: 2,629 ಕೋಟಿ ರೂ.ವೆಚ್ಚದ ವೈಟ್ ಟ್ಯಾಪಿಂಗ್ ಯೋಜನೆಗೆ ತಡೆ
Update: 2019-08-19 13:09 GMT
ಬೆಂಗಳೂರು, ಆ. 19: ಸಿಎಂ ನಗರೋತ್ಥಾನ ಅನುದಾನದಡಿ ಬಿಬಿಎಂಪಿ ವ್ಯಾಪ್ತಿಯ ಆಯ್ದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಯಲ್ಲಿ ಅಪಾರ ಪ್ರಮಾಣದ ಅನುದಾನ ದುರುಪಯೋಗವಾಗಿರುವ ಬಗ್ಗೆ ದೂರುಗಳ ಹಿನ್ನೆಲೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಗಳನ್ನು ತಡೆಹಿಡಿಯಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ.
ಮುಖ್ಯಮಂತ್ರಿಗಳ ಒಂದು, ಎರಡು ಮತ್ತು ಮೂರು ಹಂತದಲ್ಲಿ ಒಟ್ಟು 159 ರಸ್ತೆಗಳನ್ನು ಒಟ್ಟು 2,629 ಕೋಟಿ ರೂ.ವೆಚ್ಚದಲ್ಲಿ ವೈಟ್ ಟಾಪಿಂಗ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಆ ಪೈಕಿ ಒಂದು ಮತ್ತು ಎರಡನೆ ಹಂತದ ಕಾಮಗಾರಿಗಳಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡಲು ಸಿಎಂ ಸೂಚನೆ ನೀಡಿದ್ದಾರೆ.
ಎರಡು ಹಂತದ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಬಿಬಿಎಂಪಿಯ ಬಿಜೆಪಿ ಸದಸ್ಯರು ದೂರು ನೀಡಿದ್ದು, ಆ ಹಿನ್ನೆಲೆಯಲ್ಲಿ ಮೂರನೆ ಹಂತದ 1,139 ಕೋಟಿ ರೂ.ಮೊತ್ತದ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ತಡೆ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.