ಮುಖ್ಯಮಂತ್ರಿಯನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್
Update: 2019-08-23 05:34 GMT
ಬೆಂಗಳೂರು, ಆ.23: ಬಿಜೆಪಿ ನೂತನ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದರು.
ಹೊಸದಿಲ್ಲಿಯಲ್ಲಿಂದು ಯಡಿಯೂರಪ್ಪರನ್ನು ರಾಜ್ಯಾಧ್ಯಕ್ಷರಾದ ಬಳಿಕ ಇದೆ ಮೊದಲ ಬಾರಿಗೆ ನಳಿನ್ ಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭ ಶಾಸಕರಾದ ವೇದವ್ಯಾಸ್ ಕಾಮತ್, ಸಂಜೀವ ಮಠಂದೂರು, ಭರತ್ ಶೆಟ್ಟಿ, ಹರೀಶ್ ಪೂಂಜಾ, ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಜೊತೆಗಿದ್ದರು.