ರಸ್ತೆ ಅಪಘಾತಕ್ಕೆ ಯುವಕ ಬಲಿ
Update: 2019-08-25 14:03 GMT
ಬೆಂಗಳೂರು, ಆ.25: ಸ್ಕೂಟರ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಯುವಕನೊಬ್ಬ ಆಯಾತಪ್ಪಿ ಬಿದ್ದು ಪರಿಣಾಮ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಚಿಕ್ಕಪೇಟೆಯ ಸಿರ್ಸಿ ರಸ್ತೆಯಲ್ಲಿ ನಡೆದಿದೆ. ಜಗನ್‌ಜೀವನ್‌ರಾಮ್ ನಗರದ ಪವನ್ ಕುಮಾರ್ (25) ಮೃತ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಪೇಟೆಯ ರಾಯಲ್ ವೃತ್ತದ ಬುಕ್ ಏಜೆನ್ಸಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪವನ್ ಕುಮಾರ್, ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಸಿರ್ಸಿ ರಸ್ತೆಯಲ್ಲಿ ಆಯಾತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿರುವ ಚಿಕ್ಕಪೇಟೆ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.