ಇಂದಿರಾ ಕ್ಯಾಂಟೀನ್ ಸಬ್ಸಿಡಿ ಹಣ ದುರ್ಬಳಕೆ ಆರೋಪ: ತನಿಖಾ ವರದಿಗೆ ಸಿಎಂ ಆದೇಶ

Update: 2019-08-26 17:26 GMT

ಬೆಂಗಳೂರು, ಆ. 26: ಇಂದಿರಾ ಕ್ಯಾಂಟೀನ್ ಸಬ್ಸಿಡಿ ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಈ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ, ತನಿಖಾ ವರದಿ ಸಲ್ಲಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಆದೇಶ ಹೊರಡಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವ ಯಡಿಯೂರಪ್ಪ, ಗುತ್ತಿಗೆ ನೀಡಿರುವ ಸಂಸ್ಥೆಗಳ ಹಾಗೂ ಕ್ಯಾಂಟೀನ್ ನಿರ್ವಹಣೆ ಮಾಡುತ್ತಿರುವ ಸಂಸ್ಥೆಗಳ ವಿರುದ್ಧ ತನಿಖೆಗೆ ಆದೇಶಿಸಿದೆ. ಜೊತೆಯಲ್ಲೇ ಚೆಫ್ ಟಾಕ್ ಹಾಸ್ಪಿಟಾಲಿಟಿ ಸರ್ವೀಸ್ ಹಾಗೂ ರಿವಾರ್ಡ್ಸ್ ಸಂಸ್ಥೆಗಳ ವಿರುದ್ಧ ತನಿಖೆಗೆ ಆದೇಶ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ 147 ಇಂದಿರಾ ಕ್ಯಾಂಟೀನ್ ಮತ್ತು 15 ಮೊಬೈಲ್ ಕ್ಯಾಂಟಿನ್‌ಗಳಲ್ಲಿ ಪ್ರತಿ ತಿಂಗಳು ಸುಮಾರು 62.70ಲಕ್ಷ ಮಂದಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟವನ್ನು ಪೂರೈಸಲಾಗುತ್ತದೆ ಎಂಬ ಮಾಹಿತಿ ನೀಡಿ ಅಪಾರ ಮೊತ್ತದ ಸಬ್ಸಿಡಿ ಪಡೆಯಲಾಗುತ್ತಿದೆ. ವಾಸ್ತವವಾಗಿ ಈ ಅಂಕಿ-ಅಂಶಗಳು ತಪ್ಪು ಮಾಹಿತಿಯಿಂದ ಕೂಡಿದ್ದು, ಅಪಾರ ಪ್ರಮಾಣದ ಸಬ್ಸಿಡಿಯನ್ನು ವಂಚಿಸಲಾಗುತ್ತದೆ ಎಂಬ ದೂರುಗಳು ಬಂದಿವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News