ಒಂದು ತಿಂಗಳಲ್ಲಿ ಮಾಹಿತಿ ತಂತ್ರಜ್ಞಾನ ಹೊಸ ನೀತಿಯನ್ನು ಜಾರಿಗೆ ತರಲಾಗುವುದು: ಇ.ವಿ.ರಮಣರೆಡ್ಡಿ

Update: 2019-08-28 07:26 GMT

ಮೈಸೂರು: ಮಾಹಿತಿ ತಂತ್ರಜ್ಞಾನ ಹೊಸ ನೀತಿಯನ್ನು ಒಂದು ತಿಂಗಳಲ್ಲಿ ಜಾರಿಗೆ ತರಲಾಗುವುದು ಎಂದು ಮಾಹಿತಿ  ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ ತಿಳಿಸಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ ಆಯೋಜಿಸಿದ್ದ ಬೆಂಗಳೂರು ಟೆಕ್ ಸಮ್ಮಿಟ್ ಮಾಹಿತಿ ತಂತ್ರಜ್ಞಾನ ಕಾರ್ಯಗಾರದಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಹಿತಿ ತಂತ್ರಜ್ಞಾನದ ಹೊಸ ನೀತಿಯನ್ನು ಒಂದು ತಿಂಗಳಲ್ಲಿ ಜಾರಿಮಾಡಲಿದ್ದು, ಇದರಿಂದ ದ್ವಿತೀಯ ಹಂತ ಮತ್ತು ತೃತೀಯ ಹಂತದ ನಗರಗಳಲ್ಲಿ ಐಟಿ ಅಭಿವೃದ್ಧಿ ಪಡಿಸಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.

ರಾಜ್ಯಾದ್ಯಂತ 26 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕೌಶಲ್ಯ ತರಬೇತಿ ಕೇಂದ್ರಗಳನ್ನು ಆರಂಭಿಸಿ ಕೌಶಲ್ಯದ ಬಗ್ಗೆ ಅರಿವು ಮೂಡಿಸಲಾಗುವುದು ಎಂದೂ ಹೇಳಿದರು.

ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಐಟಿ ಕಂಪನಿಗಳನ್ನು ಪ್ರಾರಂಭಿಸಲು ಸರಕಾರ ಅನುದಾನಗಳನ್ನು ನೀಡದಿದ್ದರೂ ಅವರಿಗೆ ಉತ್ತಮ ರೀತಿಯಲ್ಲಿ ಸಹಕರಿಸಿದರೆ ಸಾಕು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News