ಇಂದಿರಾ ಕ್ಯಾಂಟೀನ್ ಮುಚ್ಚುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
Update: 2019-08-28 14:28 GMT
ಬೆಂಗಳೂರು, ಆ. 28: ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚುವ ಪ್ರಶ್ನೆಯೆ ಇಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಅವ್ಯವಹಾರ ಆರೋಪಗಳ ಹಿನ್ನೆಲೆಯಲ್ಲಿ ತನಿಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬುಧವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚುವ ಯೋಚನೆಯೂ ನಮ್ಮ ಸರಕಾರಕ್ಕೆ ಇಲ್ಲ. ಅಲ್ಲದೆ, ಕ್ಯಾಂಟೀನ್‌ಗಳಿಗೆ ಅನುದಾನವನ್ನು ತಡೆ ಹಿಡಿದಿಲ್ಲ. ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಇನ್ಫೋಸಿಸ್ ಫೌಂಡೇಷನ್‌ನ ಸುಧಾಮೂರ್ತಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿದ್ದು, ಈ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಈ ಸಂಬಂಧ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.