ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-08-30 14:14 GMT

ಬೆಂಗಳೂರು, ಆ.30: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿಯನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ಹಾಲಿ ಹುದ್ದೆಯಲ್ಲಿ ಪ್ರಭಾರದಲ್ಲಿ ಮುಂದುವರೆಸಲಾಗಿದೆ.

ದಾವಣಗೆರೆ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಬಸವರಾಜೇಂದ್ರರನ್ನು ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News