ಈ.ಡಿ. ಅಧಿಕಾರಿಗಳ ವರ್ತನೆ ಪ್ರತಿಕಾರದ್ದು: ಕುಮಾರಸ್ವಾಮಿ

Update: 2019-09-01 12:40 GMT

ಬೆಂಗಳೂರು, ಸೆ. 1: ‘ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಡಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಗೌರಿ-ಗಣೇಶ ಹಬ್ಬದ ದಿನದಲ್ಲೂ ವಿಚಾರಣೆ ನಡೆಸುತ್ತಿರುವ ಇಡಿ ವರ್ತನೆಗೆ ಆಕ್ರೋಶ ಹೊರಹಾಕಿದ್ದು, ಗೌರಿ-ಗಣೇಶ ಹಿಂದೂಗಳ ಪ್ರಮುಖ ಹಬ್ಬವಾಗಿದೆ. ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳ ಬಳಿ ಒಂದು ದಿನ ವಿಚಾರಣೆಗೆ ವಿನಾಯ್ತಿ ಕೇಳಿದರೂ ಕೊಡಲಿಲ್ಲ. ಇಡಿಯವರ ಈ ವರ್ತನೆ ಪ್ರತೀಕಾರದ ವರ್ತನೆ ಅಲ್ಲದೆ ಏನು ಎಂದು ಪ್ರಶ್ನಿಸಿದ್ದಾರೆ.

‘ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವ ಮೂಲಕ ಎಲ್ಲರಿಗೂ ಮಾದರಿಯಾಗೋಣ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ.

‘ವಿಘ್ನ ವಿನಾಶಕನು ಎಲ್ಲರ ಬಾಳಲ್ಲೂ ಸುಖ, ಸಂತೋಷ, ಸಮೃದ್ಧಿಯನ್ನು ತರಲಿ’ ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ನಾಡಿನ ಜನತೆಗೆ ಶುಭ ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News