ರೈಲ್ವೇ ನಿಲ್ದಾಣಗಳಲ್ಲಿ ಹೆಚ್ಚಿದ ಭದ್ರತೆಗೆ ಡ್ರೋನ್ ಕ್ಯಾಮರಾ ಬಳಕೆಗೆ ಚಿಂತನೆ

Update: 2019-09-04 16:14 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.4: ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಆಧುನಿಕ ತಂತ್ರಜ್ಞಾನದ ಸಹಾಯದಿಂದ ರೈಲ್ವೇ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲು ಮುಂದಾಗಿದ್ದೇವೆ ಎಂದು ರಾಜ್ಯ ರೈಲ್ವೆ ಭದ್ರತಾ ಪಡೆ (ಆರ್‌ಪಿಎಫ್) ಮಹಾ ನಿರ್ದೇಶಕ ಅರುಣ್ ಕುಮಾರ್ ಹೇಳಿದರು.

ಬುಧವಾರ ಬೆಂಗಳೂರು ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಹೆಚ್ಚಿನ ರೈಲ್ವೆ ನಿಲ್ದಾಣಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಪ್ರಯಾಣಿಕರ ಭದ್ರತೆ ದೃಷ್ಟಿಯಿಂದ ಡ್ರೋನ್ ಕ್ಯಾಮರಾ ಬಳಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಆರ್‌ಎಂಎಸ್ ಸ್‌ಟಾವೇರ್ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಇಸ್ರೋ ಸಂಸ್ಥೆಯ ಜತೆ ಆರ್‌ಪಿಎ್ ಇಲಾಖೆಯು ಒಪ್ಪಂದ ಮಾಡಿಕೊಂಡಿದ್ದು, ಈ ಸಾಪ್ಟ್ ವೇರ್‌ನಿಂದ ಯಾವ ರೈಲು ಯಾವ ಪ್ರದೇಶದಲ್ಲಿ ಚಲಿಸುತ್ತಿದೆ ಎಂಬ ಮಾಹಿತಿ ಸಿಗಲಿದೆ. ಅಷ್ಟೇ ಅಲ್ಲದೆ, ಗೂಡ್ಸ್ ರೈಲುಗಳಲ್ಲಿ ನಡೆಯುತ್ತಿರುವ ದರೋಡೆ ಪ್ರಕರಣಗಳನ್ನು ತಪ್ಪಿಸಬಹುದು ಎಂದರು.

ರೈಲ್ವೆ ನಿಲ್ದಾಣ ಹಾಗೂ ರೈಲುಗಳಲ್ಲಿ ನಡೆಯುವ ಕಳ್ಳತನ, ದರೋಡೆ, ಸುಲಿಗೆ ಸೇರಿ ಹಲವಾರು ಅಪರಾಧಗಳನ್ನು ತಡೆಗಟ್ಟುವಲ್ಲಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಯಶಸ್ವಿಯಾಗಿದೆ. ರೈಲಿನ ಮೂಲಕ ಮಾನವ ಕಳ್ಳಸಾಗಾಣೆ ಪ್ರಕರಣಗಳು ಬೆಂಗಳೂರಿನಲ್ಲಿ ಹೆಚ್ಚಳವಾಗಿದ್ದು, ಕಳೆದ ಒಂದು ವರ್ಷದಲ್ಲಿ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News