ಋಣ ಪರಿಹಾರ ವಿಧೇಯಕ ಜಾರಿ: ಅಕ್ಟೋಬರ್ 22ರೊಳಗೆ ಅಗತ್ಯ ದಾಖಲೆ ಸಲ್ಲಿಸಲು ಕೋರಿಕೆ

Update: 2019-09-09 12:40 GMT

ಬೆಂಗಳೂರು, ಸೆ. 9: ಕರ್ನಾಟಕ ಋಣ ಪರಿಹಾರ ವಿಧೇಯಕ-2018, ಜುಲೈ 23ರಿಂದ ಜಾರಿಗೆ ಬಂದಿದ್ದು, ವಾರ್ಷಿಕ ಆದಾಯ 1.20ಲಕ್ಷ ರೂ. ಮೀರದಿರುವ ಸಣ್ಣ ರೈತರು, ಭೂ ರಹಿತ ಕೃಷಿ ಕಾರ್ಮಿಕರು ಮತ್ತು ದುರ್ಬಲ ವರ್ಗಗಳ ಜನರು ಖಾಸಗಿ ಲೇವಾದೇವಿಗಾರರು ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಈ ಸೌಲಭ್ಯ ಪಡೆಯಬಹುದೆಂದು ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ಮತ್ತು ಆನೇಕಲ್ ತಾಲೂಕುಗಳ ಅರ್ಹ ಸಾರ್ವಜನಿಕರು ಉಪವಿಭಾಗಾಧಿಕಾರಿ/ತಹಶಿಲ್ದಾರ್ ಕಚೇರಿಗಳಲ್ಲಿ ನಿಗದಿತ ಅರ್ಜಿ ನಮೂನೆ 2ನ್ನು ಪಡೆದು, ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಲೇವಾದೇವಿದಾರರು ನೀಡಿರುವ ರಸೀದಿ ಪ್ರತಿ, ಪಡಿತರ ಚೀಟಿ, ತಹಶೀಲ್ದಾರರಿಂದ ಪಡೆದ ಸಣ್ಣ ಹಿಡುವಳಿದಾರರ ದೃಢೀಕರಣ, ಭೂ ರಹಿತ ಕೃಷಿ ಕಾರ್ಮಿಕರ ದೃಢೀಕರಣ, ಆದಾಯ ದೃಢೀಕರಣ ಇತ್ಯಾದಿ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕು ಕಚೇರಿಗಳಲ್ಲಿ ಅ.22ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪವಿಭಾಗಾಧಿಕಾರಿಗಳ ಕಾರ್ಯಾಲಯ, ಬೆಂಗಳೂರು ದಕ್ಷಿಣ ಉಪವಿಭಾಗ ಬೆಂಗಳೂರು, ಕಂದಾಯ ಭವನ, 2ನೆ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560009 ಅಥವಾ ದೂರವಾಣಿ ಸಂಖ್ಯೆ 080-2221 0076ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ಕೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News