ಈಡಿ ಸಮನ್ಸ್ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಡಿಕೆಶಿ

Update: 2019-09-09 16:21 GMT

ಬೆಂಗಳೂರು, ಸೆ.9: ಜಾರಿ ನಿರ್ದೇಶನಾಲಯ(ಈಡಿ) ಜಾರಿಗೊಳಿಸಿದ್ದ ಸಮನ್ಸ್ ರದ್ದು ಕೋರಿ ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿದ ಅರ್ಜಿ ವಜಾಗೊಳಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಡಿಕೆಶಿ ಪರ ವಕೀಲರು ಸೋಮವಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು.

ತುರ್ತು ವಿಚಾರಣೆ ನಡೆಸುವಂತೆ ನ್ಯಾಯಪೀಠಕ್ಕೆ ವಕೀಲರು ಮನವಿ ಮಾಡಿದರು. ಸೆ.11ಕ್ಕೆ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠ ಹೇಳಿದೆ.

ಆದಾಯ ತೆರಿಗೆ ಇಲಾಖೆ, ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ(ಸಿಆರ್‌ಪಿಸಿ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಇದರನ್ವಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಸಿಐಆರ್(ಪೊಲೀಸ್ ಎಫ್‌ಐಆರ್‌ಗೆ ಸಮಾನವಾದ-ಜಾರಿ ಪ್ರಕರಣ ಮಾಹಿತಿ ವರದಿ) ದಾಖಲಿಸಿದ್ದಾರೆ. ಹೀಗಾಗಿ, ಈ ಹಂತದಲ್ಲಿ ಆರೋಪಿಗಳ ಅರ್ಜಿಗಳು ವಿಚಾರಣೆಗೆ ಅರ್ಹವಾಗಿಲ್ಲ ಎಂದು ಏಕಸದಸ್ಯ ಪೀಠ ತೀರ್ಪಿನಲ್ಲಿ ತಿಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News