ಸಂಚಾರಿ ನಿಯಮ ಉಲ್ಲಂಘನೆ: 5 ದಿನದಲ್ಲಿ 72.49 ಲಕ್ಷ ದಂಡ ವಸೂಲಿ !

Update: 2019-09-09 17:01 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.9: ಮೋಟಾರ್ ವಾಹನ ಕಾಯ್ದೆಯ ನಿಯಮದ ಪ್ರಕಾರ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಸಂಚಾರ ಪೊಲಿಸರು ಕಣ್ಗಾವಲು ಇಟ್ಟಿದ್ದು, ಹೊಸ ಕಾಯ್ದೆ ಜಾರಿಯಾದ ಐದನೇ ದಿನಕ್ಕೆ ಬರೋಬ್ಬರಿ 72.49 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ಸರಕಾರದ ಅಧಿಸೂಚನೆ ಬಳಿಕ ಸೆ.4ರಿಂದ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ನಗರ ಸಂಚಾರ ಪೊಲೀಸರು, ವಿವಿಧ ಪ್ರಕರಣಗಳಿಗೆ ಸಂಬಂಧಪಟ್ಟಂತೆ ದಂಡ ಮೊತ್ತ ವಸೂಲಿ ಮಾಡಲಾಗಿದ್ದು, ಇದರಲ್ಲಿ ಮದ್ಯ ಸೇವಿಸಿ ವಾಹನ ಸವಾರರ ಸಂಖ್ಯೆ ಹೆಚ್ಚಾಗಿದ್ದು, 72 ಪ್ರಕರಣಗಳು ಬೆಳಕಿಗೆ ಬಂದಿದೆ.

ಯಾವ ಪ್ರಕರಣ: ಏಕಮುಖ ವಿರುದ್ಧವಾಗಿ 425 ಪ್ರಕರಣಗಳು ಬೆಳಕಿಗೆ ಬಂದಿದ್ದು, 2.12 ಲಕ್ಷ ರೂ. ವಸೂಲಿ ಮಾಡಲಾಗಿದೆ. ಅದೇ ರೀತಿ, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿದ 4,613 ಪ್ರಕರಣಗಳನ್ನು ಪತ್ತೆ ಹಚ್ಚಿ 4.61 ಲಕ್ಷ ರೂ. ದಂಡ ವಿಧಿಸಲಾಗಿದೆ. ಅದೇ ರೀತಿ, ವಿವಿಧ ಪ್ರಕರಣಗಳಿಗೆ 6,813 ಮಂದಿಗೆ ದಂಡ ಹಾಕಲಾಗಿದೆ ಎಂದು ಸಂಚಾರ ಪೊಲೀಸ್ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News