ಸೆ.22ಕ್ಕೆ ಸಿವಿಲ್ ಪೊಲೀಸ್ ಪೇದೆ ಹುದ್ದೆಗಳ ನೇಮಕಾತಿಗೆ ಪರೀಕ್ಷೆ
Update: 2019-09-13 17:10 GMT
ಬೆಂಗಳೂರು, ಸೆ.13: ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಖಾಲಿ ಉಳಿದಿರುವ ಸಿವಿಲ್ ಪೊಲೀಸ್ ಪೇದೆ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೆ.22ರಂದು ಲಿಖಿತ ಪರೀಕ್ಷೆ ನಡೆಯಲಿದೆ.
ಬೆಂಗಳೂರು ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ 18,500 ಅಭ್ಯರ್ಥಿಗಳಿಗೆ ಅಂದು ಬೆಳಗ್ಗೆ 10:30ರಿಂದ ಮಧ್ಯಾಹ್ನ 12ರ ವರೆಗೆ ಲಿಖಿತ ಪರೀಕ್ಷೆ ಜರುಗಲಿದೆ. ಅರ್ಹ ಅಭ್ಯರ್ಥಿಗಳು ಕರೆಪತ್ರಗಳನ್ನು www.ksp.gov.in ವೆಬ್ಸೈಟ್ನಿಂದ ಪಡೆದುಕೊಂಡು ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಲು ಪೊಲೀಸ್ ಆಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.