ಅನರ್ಹ ಶಾಸಕರ ವಿಚಾರದಲ್ಲಿ ಚುನಾವಣಾ ಆಯೋಗದ ಮಧ್ಯಪ್ರವೇಶ ಸರಿಯಲ್ಲ: ದಿನೇಶ್ ಗುಂಡೂರಾವ್

Update: 2019-09-23 14:20 GMT

ಬೆಂಗಳೂರು, ಸೆ. 23: ಅನರ್ಹ ಶಾಸಕರ ಪ್ರಕರಣಕ್ಕೂ ಚುನಾವಣಾ ಆಯೋಗಕ್ಕೂ ಯಾವುದೇ ಸಂಬಂಧವಿಲ್ಲ. ಹೀಗಾಗಿ ಈ ವಿಚಾರದಲ್ಲಿ ಆಯೋಗ ಮಧ್ಯಪ್ರವೇಶ ಮಾಡಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಆಕ್ಷೇಪಿಸಿದ್ದಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಮ್ಮ ಪಕ್ಷಕ್ಕೆ ನೋಟಿಸ್ ನೀಡಿದ್ದು, ನಮ್ಮ ಪರ ವಕೀಲರು ವಾದ ಮಂಡಿಸಲಿದ್ದಾರೆ. ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಮಾಡಿದ್ದು, ಕೋರ್ಟ್ ಸ್ಪೀಕರ್ ಆದೇಶವನ್ನು ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಹೇಳಿರಬಹುದು. ಆದರೆ, ಈ ವಿಚಾರದಲ್ಲಿ ಆಯೋಗ, ಕೋರ್ಟ್‌ನಲ್ಲಿ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ ಎಂದು ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.

15 ಕ್ಷೇತ್ರಗಳ ಉಪಚುನಾವಣೆಗೆ ಶೀಘ್ರವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈಗಾಗಲೇ ಚುನಾವಣೆಗೆ ನಾವು ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ. ಎಲ್ಲ ಕ್ಷೇತ್ರಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News