ಬಿಎಂಟಿಸಿ ಬಸ್‌ ಪಾಸ್ ವಿತರಣೆಗೆ ವಿಶೇಷ ತಂಡ ರಚನೆ

Update: 2019-09-23 17:35 GMT

ಬೆಂಗಳೂರು, ಸೆ.23: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ ಕಾರಣಾಂತರಗಳಿಂದ ಪಾಸುಗಳನ್ನು ಪಡೆಯಲು ಸಾಧ್ಯವಾಗದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪಾಸ್ ವಿತರಣೆ ಸಂಬಂಧ ವಿಶೇಷ ತಂಡಗಳನ್ನು ರಚಿಸಲಾಗಿದೆ.

ಈ ತಂಡಗಳು ಈಗಾಗಲೇ 1,528 ವಿದ್ಯಾ ಸಂಸ್ಥೆಗಳಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪರವಾಗಿ ವಿದ್ಯಾಸಂಸ್ಥೆಗಳಲ್ಲಿಯೇ ಅರ್ಜಿಗಳನ್ನು ಸಲ್ಲಿಸಿ ಪಾಸುಗಳನ್ನು ನಿಗದಿತ ಕೌಂಟರುಗಳಲ್ಲಿ ವಿತರಿಸಲಾಗಿರುತ್ತದೆ. ವಿದ್ಯಾರ್ಥಿಗಳು ಅಥವಾ ವಿದ್ಯಾಸಂಸ್ಥೆಗಳು ವಿದ್ಯಾರ್ಥಿ ಪಾಸುಗಳಿಗೆ ಸಂಬಂಧಿಸಿದ ಯಾವುದೇ ತೊಂದರೆಗಳನ್ನು ಎದುರಿಸುತ್ತಿದ್ದರೆ ಸಂಸ್ಥೆಯ ಕೆಂಪೇಗೌಡ ಬಸ್ ನಿಲ್ದಾಣದಲ್ಲಿರುವ ಪಾಸ್ ಕೌಂಟರನ್ನು ಸಂಪರ್ಕಿಸಬಹುದಾಗಿದೆ.

ಸದರಿ ಸೌಲಭ್ಯವು ಕಾರಣಾಂತರಗಳಿಂದ ಇಲ್ಲಿಯವರೆಗೂ ಪಾಸ್‌ಗಳನ್ನು ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸಲಿದ್ದು, ಉಳಿದಂತೆ ಇನ್ನಿತರೆ ಎಲ್ಲ ವಿದ್ಯಾರ್ಥಿಗಳು ಹಿಂದಿನ ಸುತ್ತೋಲೆಯಲ್ಲಿ ತಿಳಿಸಿರುವಂತೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ನಿಗದಿತ ಕೌಂಟರುಗಳಲ್ಲಿ ಪಾಸುಗಳನ್ನು ಪಡೆಯಬೇಕಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News