ರಾಜ್ಯದ ಆರ್ಥಿಕ ಸ್ಥಿತಿ ಚೆನ್ನಾಗಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

Update: 2019-09-25 13:17 GMT

ಬೆಂಗಳೂರು, ಸೆ.25: ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ಸಂಭವಿಸಿದ ಪರಿಣಾಮ ರಾಜ್ಯದ ಆರ್ಥಿಕ ಸ್ಥಿತಿ ಚೆನ್ನಾಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಷಾದಿಸಿದರು.

ಬುಧವಾರ ರಾಷ್ಟ್ರೀಯ ರಿಯಲ್ ಎಸ್ಟೇಟ್ ಅಭಿವೃದ್ಧಿ ಮಂಡಳಿ ವತಿಯಿಂದ ಕರ್ನಾಟಕ ರಾಜ್ಯ, ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಸ್ವಂತ ಮನೆ ಕಲ್ಪಿಸುವುದು ಸರಕಾರದ ಗುರಿ. ಆದರೆ, ನೆರೆ ಹಾವಳಿಯಿಂದಾಗಿ ಆರ್ಥಿಕ ಸ್ಥಿತಿ ಚೆನ್ನಾಗಿಲ್ಲ. ಆದರೂ ಸರಕಾರ ಈ ಸಮಸ್ಯೆಯನ್ನು ನಿಭಾಯಿಸಲಿದೆ ಎಂದರು.

ನೆರೆ ಹಾವಳಿಯಿಂದಾಗಿ ಉತ್ತರ ಕರ್ನಾಟಕದಲ್ಲಿ ಲಕ್ಷಾಂತರ ಮಂದಿ ಮನೆ ಕಳೆದುಕೊಂಡಿದ್ದಾರೆ. ಇವರಿಗೆ ಮನೆ ನಿರ್ಮಿಸುವುದು ನಮ್ಮ ಮೊದಲ ಆದ್ಯತೆ. ಪ್ರತಿ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಒದಗಿಸಲಾಗುವುದು. ಮುಂಗಡವಾಗಿ ಒಂದು ಲಕ್ಷ ರೂ. ನೀಡಲಾಗುತ್ತಿದೆ. ಸರಕಾರದೊಂದಿಗೆ ಬಿಲ್ಡರ್ಸ್‌ಗಳು ಕೈ ಜೋಡಿಸಬೇಕೆಂದು ಅವರು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News