ಹಿದಾಯತ್ ವುಲ್ಲಾ ಉಪಕಾರ್ಯದರ್ಶಿಯಾಗಿ ಮುಂದುವರಿಕೆ
Update: 2019-09-25 17:44 GMT
ಬೆಂಗಳೂರು, ಸೆ.25: ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ, ಕೆಎಎಸ್ ಅಧಿಕಾರಿ ಶಿಲ್ಪಾ ಎಂ. ಅವರನ್ನು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಉಪಕಾರ್ಯದರ್ಶಿ ಹಿದಾಯತ್ ವುಲ್ಲಾ ಅವರ ಜಾಗಕ್ಕೆ ನೇಮಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಹಾಗೂ ಹಿದಾಯತ್ ವುಲ್ಲಾ ಅವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಹುದ್ದೆಯಲ್ಲಿಯೇ ಮುಂದುವರೆಯುವಂತೆ ಸರಕಾರ ಅಧಿಸೂಚನೆ ಹೊರಡಿಸಿದೆ.