ಜಿ.ಎಸ್.ಜಯದೇವ್‌ಗೆ ಪ್ರತಿಷ್ಠಿತ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’

Update: 2019-09-26 16:58 GMT

ಬೆಂಗಳೂರು, ಸೆ. 26: ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಅ.2ರಂದು ರಾಜ್ಯ ಸರಕಾರದ ವತಿಯಿಂದ ನೀಡುವ ಪ್ರತಿಷ್ಠಿತ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಚಾಮರಾಜನಗರದ ದೀನಬಂಧು ಸೇವಾ ಟ್ರಸ್ಟ್‌ನ ಸಂಸ್ಥಾಪಕ ಜಿ.ಎಸ್.ಜಯದೇವ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ನೇಮಿಸಿದ್ದ ನಿವೃತ್ತ ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ನೇತೃತ್ವದ ಸಮಿತಿ ಶಿಫಾರಸ್ಸನ್ನು ಅಂಗೀಕರಿಸಿದ್ದು, ಪ್ರಶಸ್ತಿ ಘೋಷಣೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ವಾರ್ತಾ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ಎನ್.ಜಯಶ್ರೀ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News