ಚುನಾವಣಾ ಆಯೋಗ ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ: ಸಿದ್ದರಾಮಯ್ಯ
ಬೆಂಗಳೂರು, ಸೆ.27: ಕೇಂದ್ರ ಚುನಾವಣಾ ಆಯೋಗದ ಉದ್ದೇಶವೇ ಅರ್ಥವಾಗುತ್ತಿಲ್ಲ. ಆಯೋಗ ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇಂದ್ರ ಚುನಾವಣಾ ಆಯೋಗದ ಉದ್ದೇಶವೇ ಅರ್ಥವಾಗುತ್ತಿಲ್ಲ. ಆಯೋಗ ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ತರಾತುರಿಯಲ್ಲಿ ಚುನಾವಣೆ ಮುಂದೂಡಿದ್ದ ಆಯೋಗ ಮತ್ತೆ ದಿನಾಂಕ ಘೋಷಣೆ ಮಾಡಿರುವುದು ಅಚ್ಚರಿ ಮೂಡಿಸಿದೆ. ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧವಿದೆ. ಆದರೆ ಆಯೋಗದ ನಡೆ ಮಾತ್ರ ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ ಎಂದು ದೂರಿದ್ದಾರೆ.
ಕೇಂದ್ರ ಚುನಾವಣಾ ಆಯೋಗದ ಉದ್ದೇಶವೇ ಅರ್ಥವಾಗುತ್ತಿಲ್ಲ. ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ಮೊದಲು ತರಾತುರಿಯಲ್ಲಿ ಚುನಾವಣೆ ಮುಂದೂಡಿ, ಮತ್ತೆ ದಿನಾಂಕ ಘೋಷಣೆ ಮಾಡಿರುವುದು ಅಚ್ಚರಿ ಮೂಡಿಸಿದೆ. ಚುನಾವಣೆ ಎದುರಿಸಲು ನಾವು ಸಿದ್ಧರಿದ್ದೇವೆ, ಆದರೆ ಆಯೋಗದ ನಡೆ ಮಾತ್ರ ಸಹಜವಾಗಿಯೇ ಅನುಮಾನ ಮೂಡುವಂತಿದೆ.
— Siddaramaiah (@siddaramaiah) September 27, 2019