ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರನ್ನಾಗಿ ಬಿ.ಜೆ.ಪುಟ್ಟಸ್ವಾಮಿ ನೇಮಕ

Update: 2019-09-27 17:28 GMT

ಬೆಂಗಳೂರು, ಸೆ. 27: ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರನ್ನಾಗಿ ಮಾಜಿ ಶಾಸಕ ಬಿ.ಜೆ.ಪುಟ್ಟಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಇದೇ ವೇಳೆ ಅವರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಆರ್.ಎಸ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News