ಏರ್ ಶೋ ಪಾರ್ಕಿಂಗ್‌ನಲ್ಲಿ ಅಗ್ನಿ ಅವಘಡ ಪ್ರಕರಣ: ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2019-10-01 15:16 GMT
ಏರ್ ಶೋ ಪಾರ್ಕಿಂಗ್‌ನಲ್ಲಿ ಅಗ್ನಿ ಅವಘಡ (ಫೈಲ್ ಚಿತ್ರ)

ಬೆಂಗಳೂರು, ಅ.1: ಯಲಹಂಕದ ಏರೋ ಇಂಡಿಯಾದ ಡೊಮೆಸ್ಟಿಕ್ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಹಸ್ತಾಂತರಿಸಲು ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಕ್ಷಣಾ ಇಲಾಖೆ, ಎಚ್‌ಎಎಲ್, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ನಗರದ ನಿವಾಸಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ, ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ನೇತೃತ್ವದ ರಜಾಕಾಲದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಫೆ.23ರಂದು ಬೆಂಗಳೂರು ಏರ್ ಶೋ ಸಂದರ್ಭದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಸುಮಾರು 400ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿದ್ದವು. ಯಾರೋ ಕಿಡಿಗೇಡಿಗಳು ಧೂಮಪಾನ ಮಾಡಿ ಕಡ್ಡಿ ಬಿಸಾಕಿದ್ದರಿಂದ ಅದು ಒಣ ಹುಲ್ಲಿನ ಮೇಲೆ ಬಿದ್ದು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿತ್ತು. ಆದರೆ, ಯಾವುದೆ ನಿಖರವಾದ ಕಾರಣ ತಿಳಿದಿರಲಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News