ಪದವೀಧರ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ: ಸಚಿವ ಸುರೇಶ್‌ ಕುಮಾರ್

Update: 2019-10-04 11:52 GMT

ಬೆಂಗಳೂರು, ಅ.4: ಪದವೀಧರ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ, ನಗರದ ಮಹಾರಾಣಿ ವಿಜ್ಞಾನ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಹೊಸ ವೃಂದ ಹಾಗೂ ವೃಂದಬಲ ನಿಗದಿ, ವೃಂದ ಮತ್ತು ನೇಮಕಾತಿ ನಿಯಮಗಳು-2017 ಇದರ ಸಾಧಕ-ಬಾಧಕಗಳ ಬಗ್ಗೆ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪದವೀಧರ ಶಿಕ್ಷಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು. ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ವಿಧಾನಮಂಡಲದ ಅಧಿವೇಶನ ಮುಗಿದ ಬಳಿಕ ಸಭೆ ನಡೆಸಲಾಗುವುದು ಎಂದು ಹೇಳಿದರು.

ಮಾಜಿ ಸಚಿವ ಬಸವರಾಜ ಹೊರಟ್ಟಿ ಮಾತನಾಡಿ, ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ತಮ್ಮ ಬೆಂಬಲವಿದೆ. ನೇಮಕಾತಿ ನಿಯಮಗಳಲ್ಲಿ ಬದಲಾವಣೆಯಾಗಬೇಕಾಗಿದೆ. ಈ ಸಂಬಂಧ ಶೀಘ್ರವೇ ಶಿಕ್ಷಕರ ಸಂಘಟನೆಗಳ ಜೊತೆ ಮಾತನಾಡಿ, ಶಿಕ್ಷಕರಿಗೆ ಅನುಕೂಲವಾಗುವ ರೀತಿಯಲ್ಲಿ ಬದಲಾಯಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎಸ್.ವೈ.ಸೊರಟ್ಟಿ ಮಾತನಾಡಿ, ರಾಜ್ಯದ ಎಲ್ಲಾ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿ ಪ್ರಾರಂಭಿಸಬೇಕು, ಪದವೀಧರ ಶಿಕ್ಷಕರ ಸೇವಾ ಜ್ಯೇಷ್ಠತೆ ಆಧರಿಸಿ 6-8ನೇ ತರಗತಿಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಮರು ಹೊಂದಾಣಿಕೆ ಮಾಡಬೇಕು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News