ಹಿಮಾಚಲ ಪ್ರದೇಶ ಹೈಕೋರ್ಟ್‌ಗೆ ಎಲ್.ನಾರಾಯಣಸ್ವಾಮಿ ಸಿಜೆ

Update: 2019-10-04 18:11 GMT

ಬೆಂಗಳೂರು, ಅ.4: ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಅವರನ್ನು ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

ಸಂವಿಧಾನದ ಕಲಂ 217ನೆ ಅಡಿ ಲಭ್ಯವಿರುವ ಅಧಿಕಾರ ಬಳಸಿ ರಾಷ್ಟ್ರಪತಿ ಅನುಮೋದನೆ ಮೇರೆಗೆ ಕಾನೂನು ಮತ್ತು ನ್ಯಾಯ ಸಚಿವಾಲಯ ಆದೇಶ ಹೊರಡಿಸಿದೆ.

ಎಲ್.ನಾರಾಯಣಸ್ವಾಮಿ ಚಿತ್ರದುರ್ಗ ಜಿಲ್ಲೆಯವರು, 1959ರ ಜು.1ರಂದು ಜನಿಸಿದ ಅವರು, 1987ರಲ್ಲಿ ವಕೀಲ ವೃತ್ತಿ ಆರಂಭಿಸಿದರು. ಹೈಕೋರ್ಟ್‌ನಲ್ಲಿ ಭೂ ಕಂದಾಯ, ಸೇವಾ ವಿಷಯಗಳು ಸೇರಿ ಹಲವು ವಿಷಯಗಳಲ್ಲಿ ನೈಪುಣ್ಯತೆ ಹೊಂದಿದ್ದರು. 2007ರಲ್ಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2009ರಲ್ಲಿ ಅವರ ಸೇವೆ ಕಾಯಂ ಆಗಿತ್ತು. 20019ರ ಆರಂಭದಲ್ಲಿ ಐದು ತಿಂಗಳ ಕಾಲ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿಯೂ ಅವರು ಕೆಲಸ ಮಾಡಿದ್ದರು.

ಹಿಮಾಚಲಪ್ರದೇಶ ಸೇರಿ ಏಳು ರಾಜ್ಯಗಳ ಹೈಕೋರ್ಟ್‌ಗೆ ಮುಖ್ಯನ್ಯಾಯಮೂರ್ತಿಗಳನ್ನು ಕೇಂದ್ರ ಸರಕಾರ ನೇಮಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News